alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕರ ವಿರುದ್ಧ ಸುಳ್ಳು ಆರೋಪ: ಸ್ಪಷ್ಟನೆ

hand-sd

ಬೆಂಗಳೂರು: ಬಿ.ಜೆ.ಪಿ. ಶಾಸಕರೊಬ್ಬರು ಮಹಿಳಾ ಪಿ.ಎಸ್.ಐ. ಜೊತೆಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಕೇಳಿ ಬಂದ ಆರೋಪ ಮತ್ತೊಂದು ತಿರುವು ಪಡೆದಿದೆ.

ಶಾಸಕ ಮತ್ತು ಅವರ ಪತ್ನಿ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾವಿಬ್ಬರೂ ಅನ್ಯೋನ್ಯವಾಗಿದ್ದೇವೆ. ಇದೆಲ್ಲ ರಾಜಕೀಯ ದುರುದ್ದೇಶದಿಂದ ಮಾಡಿದ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ.

33 ವರ್ಷದ ಮಹಿಳಾ ಪಿ.ಎಸ್.ಐ. ಜೊತೆಗೆ ಶಾಸಕ ಅನೈತಿಕ ಸಂಬಂಧ ಹೊಂದಿದ್ದು, ಅವರ ಪತ್ನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎನ್ನಲಾಗಿತ್ತು.

ಆದರೆ, ಇದನ್ನು ಶಾಸಕರು ಅಲ್ಲಗಳೆದಿದ್ದಾರೆ. ನನ್ನ ಪತ್ನಿ ಮಹಿಳಾ ಆಯೋಗಕ್ಕೆ ದೂರು ನೀಡಿಲ್ಲ. ಇದೆಲ್ಲವೂ ನನ್ನ ತೇಜೋವಧೆಗೆ ಮಾಡಿರುವ ಷಡ್ಯಂತ್ರವಾಗಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವುದರಿಂದ ನನ್ನ ಪತ್ನಿಯ ಹೆಸರಲ್ಲಿ ಯಾರೋ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಾನು ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಶಾಸಕರ ಪತ್ನಿಯೂ ಸ್ಪಷ್ಟನೆ ನೀಡಿದ್ದು, ನಾನು ಯಾರಿಗೂ ದೂರು ನೀಡಿಲ್ಲ. ಪತಿಯೊಂದಿಗೆ ನಾನು ಅನ್ಯೋನ್ಯವಾಗಿಯೇ ಇದ್ದೇನೆ. ರಾಜಕೀಯವಾಗಿ ಹಿನ್ನಡೆ ಉಂಟು ಮಾಡುವ ಕಾರಣದಿಂದ ಕೆಲವರು ಇಂತಹ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...