alex Certify
ಕನ್ನಡ ದುನಿಯಾ       Mobile App
       

Kannada Duniya

ದುನಿಯಾ ವಿಜಿ ನಿವಾಸದಲ್ಲಿ ಕಾಣಿಸಿಕೊಂಡ ನವ ಜೋಡಿ

ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಹಾಗೂ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ಲಕ್ಷ್ಮೀ ನಾಯ್ಕ್ ಗುರುವಾರದಂದು ಮೈಸೂರಿನ ದೇವಾಲಯವೊಂದರಲ್ಲಿ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ವಿವಾಹದ ನಂತರ ಸೆಲ್ಫಿ ವಿಡಿಯೋ ಮಾಡಿದ್ದ ನವ ದಂಪತಿಗಳು, ನಾಪತ್ತೆ ವದಂತಿಗಳಿಗೆ ತೆರೆ ಎಳೆಯುವ ಯತ್ನ ನಡೆಸಿದ್ದರು.

ತಮ್ಮ ಪುತ್ರಿ ನಾಪತ್ತೆಯಾಗಿದ್ದಾಳೆಂದು ಶಾಸಕ ಶಿವಮೂರ್ತಿ ನಾಯ್ಕ್ ಪೊಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದ್ದ ಲಕ್ಷ್ಮೀ ನಾಯ್ಕ್, ತಾವು ನಾಪತ್ತೆಯಾಗಿಲ್ಲ ಪರಸ್ಪರ ಒಪ್ಪಿಗೆ ಮೇರೆಗೆ ಸುಂದರ್ ಗೌಡ ಹಾಗೂ ತಾವು ವಿವಾಹವಾಗಿರುವುದಾಗಿ ಹೇಳಿಕೊಂಡಿದ್ದರು.

ಇಂದು ನವ ಜೋಡಿ, ನಟ ದುನಿಯಾ ವಿಜಯ್ ಅವರ ಕತ್ರಿಗುಪ್ಪೆ ನಿವಾಸಕ್ಕೆ ಆಗಮಿಸಿದ್ದು, ವಿಜಯ್ ಅವರೊಂದಿಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ತೆರಳಿ ತಮ್ಮ ಹೇಳಿಕೆ ದಾಖಲಿಸಲಿದ್ದಾರೆಂದು ತಿಳಿದುಬಂದಿದೆ. ಲಕ್ಷ್ಮೀ ನಾಯ್ಕ್ ನಾಪತ್ತೆಯಾಗಿದ್ದರೆಂದು ಪ್ರಕರಣ ದಾಖಲಾಗಿದ್ದ ಹಿನ್ನಲೆಯಲ್ಲಿ ಲಕ್ಷ್ಮೀ ನಾಯ್ಕ್ ಅವರ ಹೇಳಿಕೆಯನ್ನು ಪೊಲೀಸರು ಪಡೆಯಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...