alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. ಬಂಡಾಯ ಶಾಸಕರಲ್ಲಿ ಡವಡವ

ಬೆಂಗಳೂರು: ಮಾರ್ಚ್ 23 ಕ್ಕೆ ನಡೆಯಲಿರುವ ರಾಜ್ಯಸಭೆ ಚುನಾವಣೆಯಲ್ಲಿ ಜೆ.ಡಿ.ಎಸ್. ಬಂಡಾಯ ಶಾಸಕರು ಅಡ್ಡ ಮತದಾನ ಮಾಡಲಿರುವ ಹಿನ್ನಲೆಯಲ್ಲಿ ಜೆ.ಡಿ.ಎಸ್. ಹೈಕೋರ್ಟ್ ಮೊರೆ ಹೋಗಿದೆ.

2 ವರ್ಷದ ಹಿಂದೆಯೂ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದಾಗ, ಸ್ಪೀಕರ್ ಗೆ ಜೆ.ಡಿ.ಎಸ್. ವರಿಷ್ಠರು ದೂರು ಕೊಟ್ಟಿದ್ದರು. ಅರ್ಜಿ ವಿಚಾರಣೆಯ ವಿಳಂಬ ನೀತಿಗೆ ಜೆ.ಡಿ.ಎಸ್. ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದ ಸ್ಪೀಕರ್, ಇಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಜಮೀರ್ ಅಹಮ್ಮದ್ ಖಾನ್, ಚೆಲುವರಾಯಸ್ವಾಮಿ, ಹೆಚ್.ಸಿ. ಬಾಲಕೃಷ್ಣ, ಭೀಮಾನಾಯ್ಕ, ಅಖಂಡ ಶ್ರೀನಿವಾಸಮೂರ್ತಿ, ರಮೇಶ್ ಬಂಡಿಸಿದ್ದೇಗೌಡ ಅವರು ಇಂದು ಸ್ಪೀಕರ್ ಕೊಠಡಿಯಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗಲಿದ್ದಾರೆ. ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...