alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಕುರಿತು ಗುಟ್ಟು ಬಿಟ್ಟುಕೊಡದ ಮಧು ಬಂಗಾರಪ್ಪ

madhu-bangarappa-2

ಶಿವಮೊಗ್ಗ: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಗೆ ಕಡಿಮೆ ಸ್ಥಾನ ಬಂದಿರುವುದು ನಿರಾಸೆ ಮೂಡಿಸಿದೆ ಎಂದು ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನ ಬರಬಹುದೆಂದು ನಿರೀಕ್ಷೆ ಇತ್ತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಗೆ 2 ಸ್ಥಾನಗಳು ಬರಬೇಕಿತ್ತಾದರೂ ಕಡಿಮೆ ಮತಗಳ ಅಂತರದಲ್ಲಿ ಸೋತಿದ್ದೇವೆ ಎಂದು ತಿಳಿಸಿದರು.

ಅಲ್ಲದೆ ಕೆಲವು ಕ್ಷೇತ್ರಗಳಲ್ಲಿ ಸಂಬಂಧಿಕರೇ ಸ್ಪರ್ಧೆಯಲ್ಲಿದ್ದ ಕಾರಣ ಮತಗಳು ಹಂಚಿಕೆಯಾದವು. ಇದರಿಂದ ಕೆಲವು ಕ್ಷೇತ್ರಗಳಲ್ಲಿ ನಮಗೆ ಹಿನ್ನಡೆಯಾಯಿತು ಎಂದರು. ಜಿ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾದ ನಂತರ ನಾವು ಯಾರಿಗೆ ಬೆಂಬಲ ನೀಡಬೇಕೆಂಬುದನ್ನು ಚರ್ಚಿಸುತ್ತೇವೆ. ಪಕ್ಷದ ಶಾಸಕರು, ಮುಖಂಡರೊಂದಿಗೆ ಚರ್ಚಿಸಿ ಮೈತ್ರಿಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಮೀಸಲಾತಿ ಬಂದ ನಂತರ ಮೈತ್ರಿಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದ ಅವರು, ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಕಡಿಮೆ ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ದುರಾಡಳಿತದ ವಿರುದ್ದ ಬಂದ ಫಲಿತಾಂಶ ಇದಾಗಿದೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...