alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾದ ಎಂ.ಬಿ. ಪಾಟೀಲ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಸಮುದಾಯದ ಹಲವು ನಾಯಕರ ವಿರೋಧಕ್ಕೆ ಗುರಿಯಾದರೂ ಜಗ್ಗದೆ ಮುಂಚೂಣಿಯಲ್ಲಿ ನಿಂತ ತಮ್ಮನ್ನು ಕಾಂಗ್ರೆಸ್ ವರಿಷ್ಠ ಮಂಡಳಿ ಸಚಿವ ಸ್ಥಾನಕ್ಕೆ ಕಡೆಗಣಿಸಿರುವುದು ಎಂ.ಬಿ. ಪಾಟೀಲರ ಅಸಮಾಧಾನಕ್ಕೆ ಕಾರಣವೆನ್ನಲಾಗಿದೆ.

ಅಂತಿಮ ಕ್ಷಣದವರೆಗೂ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದ ಎಂ.ಬಿ. ಪಾಟೀಲ್, ನೂತನ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲವೆಂಬುದು ಖಚಿತವಾಗುತ್ತಿದ್ದಂತೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆನ್ನಲಾಗುತ್ತಿದ್ದು, ವಿಧಾನಸಭಾ ಸ್ಪೀಕರ್ ಅವರ ಬಳಿ ಸಮಯಾವಕಾಶ ಕೇಳಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...