alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟ ರಚನೆ ಕುರಿತಂತೆ ದೇವೇಗೌಡರ ನಿವಾಸದಲ್ಲಿ ಮಹತ್ವದ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳಿಯುತ್ತಾ ಬಂದರೂ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ರಚನೆ ಕುರಿತಂತೆ ಉಭಯ ಪಕ್ಷಗಳ ನಾಯಕರ ನಡುವೆ ಸಭೆ ಮೇಲೆ ಸಭೆ ನಡೆದರೂ ಇನ್ನೂ ಅಂತಿಮವಾಗಿಲ್ಲ.

ಪ್ರಮುಖ ಖಾತೆಗಳನ್ನು ಪಡೆಯುವ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಇದೀಗ ಉಭಯ ಪಕ್ಷಗಳ ನಾಯಕರು ಒಮ್ಮತಾಭಿಪ್ರಾಯಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಜೆಡಿಎಸ್ ನಿಂದ ಯಾರು ಸಚಿವರಾಗಬೇಕೆಂದು ತೀರ್ಮಾನಿಸುವ ಕುರಿತು ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರ ಪದ್ಮನಾಭ ನಗರದ ನಿವಾಸದಲ್ಲಿ ಶಾಸಕರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರೂ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸಚಿವರ ಆಯ್ಕೆ ಕುರಿತಂತೆ ಹೆಚ್ .ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿಯವರು ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...