alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಮ್ಮದ್ ನಲಪಾಡ್ ಮತ್ತು ಸ್ನೇಹಿತರಿಗೆ ವೈದ್ಯಕೀಯ ಪರೀಕ್ಷೆ

ಬೆಂಗಳೂರಿನ ಯುಬಿ ಸಿಟಿಯ ರೆಸ್ಟೋರೆಂಟ್ ನಲ್ಲಿ ಉದ್ಯಮಿ ಪುತ್ರ ವಿದ್ವತ್ ಎಂಬವರ ಮೇಲೆ ತನ್ನ ಸ್ನೇಹಿತರ ಜೊತೆಗೂಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಶಾಂತಿನಗರ ಕ್ಷೇತ್ರದ ಶಾಸಕ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

ಮೊಹಮ್ಮದ್ ನಲಪಾಡ್ ಸ್ನೇಹಿತರಾದ ಬಾಲಕೃಷ್ಣ, ಮಂಜುನಾಥ್, ಅಭಿಷೇಕ್, ಅರುಣ್ ಸೇರಿದಂತೆ ಒಟ್ಟು 5 ಮಂದಿ ಈಗಾಗಲೇ ಬಂಧಿತರಾಗಿದ್ದು, ತಲೆಮರೆಸಿಕೊಂಡಿದ್ದ ಮಹಮ್ಮದ್ ನಲಪಾಡ್ ಇಂದು ಬೆಳಿಗ್ಗೆ 12 ಗಂಟೆ ಸುಮಾರಿಗೆ ಠಾಣೆಯಲ್ಲಿ ಶರಣಾಗಿದ್ದಾರೆ.

ಆರೋಪಿಗಳೆಲ್ಲರನ್ನೂ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತಿದೆ. ಈ ಮಧ್ಯೆ ಮಹಮ್ಮದ್ ನಲಪಾಡ್ ಹ್ಯಾರಿಸ್ ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದ್ದರೆ ಗೃಹ ಸಚಿವ ರಾಮಲಿಂಗಾರೆಡ್ಡಿ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...