alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕ ರಾಜು ಕಾಗೆ ಸೇರಿ 6 ಮಂದಿ ಅರೆಸ್ಟ್

aret

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಗವಾಡ ಬಿ.ಜೆ.ಪಿ. ಶಾಸಕ ರಾಜು ಕಾಗೆ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯ ರೆಸಾರ್ಟ್ ಒಂದರಲ್ಲಿ ತಂಗಿದ್ದ ರಾಜು ಕಾಗೆ ಮತ್ತು ಕುಟುಂಬದವರು, ಭೀಮಾಶಂಕರ ದೇವಾಲಯಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಿಂದ ಅವರನ್ನು ಕರೆತರಲಾಗುತ್ತಿದೆ. ರಾಜು ಕಾಗೆ, ಸಿದ್ಧನಗೌಡ ಕಾಗೆ, ಪ್ರಸಾದ್ ಕಾಗೆ, ತೃಪ್ತಿ ರಾಜು ಕಾಗೆ, ಶೋಭಾ ಕಾಗೆ, ಚಾಲಕ ಬಾಹುಬಲಿ ಅವರನ್ನು ಬಂಧಿಸಲಾಗಿದೆ.

ಫೇಸ್ ಬುಕ್ ನಲ್ಲಿ ಶಾಸಕರ ಪುತ್ರಿಯ ಕುರಿತಾಗಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಲಾಗಿದೆ ಎಂದು ಆಕ್ರೋಶಗೊಂಡ ಕಾಗೆ ಕುಟುಂಬದವರು, ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮತ್ತು ಅವರ ತಾಯಿಯ ಮೇಲೆ ಹಲ್ಲೆ ಮಾಡಿದ್ದರು.

ಜನವರಿ 9 ರಂದು ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಅವರ ಪತ್ತೆಗೆ 4 ವಿಶೇಷ ತಂಡಗಳನ್ನು ರಚಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...