alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದಕ್ಕೆ ಹಲ್ಲೆ

crim-raju

ಬೆಳಗಾವಿ: ಶಾಸಕರೊಬ್ಬರ ಪುತ್ರಿಯ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ, ಕಾಮೆಂಟ್ ಪೋಸ್ಟ್ ಮಾಡಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಇದಕ್ಕೂ ತಮಗೂ ಸಂಬಂಧವಿಲ್ಲ. ಇದೆಲ್ಲಾ ಎ.ಪಿ.ಎಂ.ಸಿ. ಚುನಾವಣೆ ಹಿನ್ನಲೆಯಲ್ಲಿ ನಡೆದ ರಾಜಕೀಯ ಗಿಮಿಕ್ ಎಂದು ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಕಾಗವಾಡ ಕ್ಷೇತ್ರದ ಬಿ.ಜೆ.ಪಿ. ಶಾಸಕ ರಾಜು ಕಾಗೆ ಅವರ ಪುತ್ರಿಯ ಕುರಿತಾಗಿ ಫೇಸ್ ಬುಕ್ ನಲ್ಲಿ ವಿವೇಕ್ ಶೆಟ್ಟಿ ಎಂಬ ಯುವಕ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದನೆನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಶಾಸಕರ ಪುತ್ರಿ ಹಾಗೂ ಅವರ ಸಂಬಂಧಿಕರು ಉಗಾರದಲ್ಲಿರುವ ಯುವಕನ ಮನೆಗೆ ನುಗ್ಗಿ ಬಡಿಗೆಗಳಿಂದ ಹಲ್ಲೆ ನಡೆಸಿದ್ದಾರೆ.

ಇದೆಲ್ಲವೂ ಸಿ.ಸಿ. ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿವೇಕ್ ಶೆಟ್ಟಿ ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ.

ಜನವರಿ 1 ರಂದೇ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿವೇಕ್ ಶೆಟ್ಟಿ ಮೀರಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಾಗವಾಡ ಠಾಣೆ ಪೊಲೀಸರು ಆಸ್ಪತ್ರೆಗೆ ತೆರಳಿ ವಿಚಾರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ರಾಜು ಕಾಗೆ ಒಳಗೊಂಡಂತೆ, 13 ಮಂದಿಯ ವಿರುದ್ಧ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಾಜು ಕಾಗೆ, ಇದೆಲ್ಲಾ ರಾಜಕೀಯ ಪಿತೂರಿ. ತಮಗೂ ಘಟನೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...