alex Certify
ಕನ್ನಡ ದುನಿಯಾ       Mobile App
       

Kannada Duniya

ಕುದುರೆ ವ್ಯಾಪಾರದ ಕಾರಣಕ್ಕೆ ಮುಂಬೈಗೆ ಶಾಸಕರು ಶಿಫ್ಟ್

young vote

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯಲಿರುವ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಶಾಸಕರನ್ನು ಮುಂಬೈಗೆ ಕಳುಹಿಸಲಾಗಿದೆ.

ಮುಂಬೈನ ಫೈವ್ ಸ್ಟಾರ್ ಹೋಟೆಲ್ ಗೆ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಪಕ್ಷೇತರ ಶಾಸಕರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನೂ ಕೆಲವರು ಅವರನ್ನು ಸೇರಿಕೊಳ್ಳಲಿದ್ದಾರೆ. 14 ಮಂದಿ ಶಾಸಕರು ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ರಾಜ್ಯಸಭೆ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಹಾಗೂ ಜೆ.ಡಿ.ಎಸ್. ಅಭ್ಯರ್ಥಿ ಬಿ.ಎಂ. ಫಾರೂಕ್ ನಡುವೆ ಪೈಪೋಟಿ ಇರುವುದರಿಂದ ಈ ಕ್ರಮಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

ಶಾಸಕ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಪಕ್ಷೇತರ ಶಾಸಕರನ್ನು ಮುಂಬೈಗೆ ಶಿಫ್ಟ್ ಮಾಡಲಾಗಿದ್ದು, ಜೂನ್ 11ರಂದು ಮತದಾನ ನಡೆಯುವ ವೇಳೆಗೆ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತದೆ. ಈ ಮೂಲಕ ರಾಜ್ಯಸಭೆ ಚುನಾವಣೆಗೂ ರೆಸಾರ್ಟ್ ರಾಜಕಾರಣ ಕಾಲಿಟ್ಟಂತಾಗಿದೆ. ಕುದುರೆ ವ್ಯಾಪಾರ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...