alex Certify
ಕನ್ನಡ ದುನಿಯಾ       Mobile App
       

Kannada Duniya

ತಪ್ಪೊಪ್ಪಿಕೊಂಡ ನಲಪಾಡ್ ಹ್ಯಾರಿಸ್ ಕೋರ್ಟ್ ಗೆ

ಬೆಂಗಳೂರು: ಯು.ಬಿ. ಸಿಟಿಯಲ್ಲಿ ಉದ್ಯಮಿಯ ಪುತ್ರ ವಿದ್ವತ್ ಮೇಲೆ, ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ನಲಪಾಡ್ ಹ್ಯಾರಿಸ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರ ತನಿಖೆ ಮುಂದುವರೆದಿದೆ.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದಾಗ, ನಾನು ಹಲ್ಲೆ ಮಾಡಿಲ್ಲ ಎಂದು ಹೇಳಿದ್ದ ಮಹಮ್ಮದ್ ನಲಪಾಡ್ ಹ್ಯಾರಿಸ್, ಸಿ.ಸಿ.ಬಿ. ವಿಚಾರಣೆಯಲ್ಲಿ ತಾನೇ ಹಲ್ಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಸಿ.ಸಿ. ಟಿ.ವಿ. ದೃಶ್ಯಗಳ ಆಧಾರವಿರುವ ಕಾರಣ ಸಿ.ಸಿ.ಬಿ. ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದು, ವಿದ್ವತ್ ಮೇಲೆ ಹಲ್ಲೆ ಮಾಡಿದ್ದು ನಾನೇ ಎಂದು ಹೇಳಿದ್ದಾನೆ.

ಪ್ರಕರಣದಲ್ಲಿ ಎ 1 ಆರೋಪಿ ನಲಪಾಡ್ ಸೇರಿದಂತೆ 8 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ. ಎ 3 ಆರೋಪಿ ಕೃಷ್ಣ ತಲೆಮರೆಸಿಕೊಂಡಿದ್ದಾನೆ. ಪೊಲೀಸ್ ಕಸ್ಟಡಿ ಅಂತ್ಯವಾಗಲಿರುವ ಹಿನ್ನಲೆಯಲ್ಲಿ ನಾಳೆ ಕೋರ್ಟ್ ಗೆ ಹಾಜರುಪಡಿಸಲಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದಾಗಿದೆ. ಇಲ್ಲವೇ, ಪೊಲೀಸ್ ವಿಚಾರಣೆ ಮುಗಿದ ಕಾರಣ ನಲಪಾಡ್ ಮತ್ತು ಸಹಚರರಿಗೆ ಜಾಮೀನು ಸಿಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...