alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಸೇರ್ಪಡೆ ವದಂತಿಗೆ ಶಾಸಕ ಸುಧಾಕರ್ ಹೇಳಿದ್ದೇನು?

ಬೆಂಗಳೂರು: ಶಾಸಕ ಡಾ. ಸುಧಾಕರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಊಹಾಪೋಹಗಳು ಹಬ್ಬಿರುವ ಹಿನ್ನಲೆಯಲ್ಲಿ ಈ ವದಂತಿಗಳಿಗೆ ತೆರೆ ಎಳೆದಿರುವ ಶಾಸಕ ಸುಧಾಕರ್, ತಾವು ಕಾಂಗ್ರೆಸ್ ಬಿಟ್ಟು ಬೇರಾವ ಪಕ್ಷವನ್ನೂ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲ ಭಿನ್ನಾಭಿಪ್ರಾಯಗಳು, ಅಸಮಾಧಾನಗಳಿರುವುದು ನಿಜ. ಆದರೆ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲ್ಲ ಎಂದರು.

ಈ ವೇಳೆ ಮಾತನಾಡಿದ ಜಮೀರ್ ಅಹ್ಮದ್, ಸುಧಾಕರ್ ಅವರು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಅವರು ನಿನ್ನೆ ದೇವಸ್ಥಾನಕ್ಕೆ ಹೋಗಿಬಂದಿದ್ದು ನಿಜ. ಅದರಲ್ಲಿ ವಿಶೇಷವಾದ ಅರ್ಥವೇನೂ ಇಲ್ಲ. ದೇವಸ್ಥಾನಕ್ಕೆ ಹೋಗುವುದು ತಪ್ಪಾ ಎಂದು ಪ್ರಶ್ನಿಸಿದರು. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಯಾವ ಶಾಸಕರಿಗೂ ಫೋನ್ ಮಾಡಿಲ್ಲ. ಎಲ್ಲವೂ ಸರಿಯಾಗಿಯೇ ಇದೆ. ಯಾರೂ ಕಾಂಗ್ರೆಸ್ ಬಿಡುವ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...