alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡ ಬಿ.ಜೆ.ಪಿ. ಶಾಸಕರಿಗೆ ನೋಟಿಸ್

ಬೆಂಗಳೂರು: ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿನ್ನಲೆಯಲ್ಲಿ ಬಿ.ಜೆ.ಪಿ. ಶಾಸಕ ಆನಂದ್ ಸಿಂಗ್ ಅವರಿಗೆ ನೋಟಿಸ್ ನೀಡಲಾಗಿದೆ.

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಅವರಿಗೆ ಬಿ.ಜೆ.ಪಿ. ಶಿಸ್ತು ಸಮಿತಿ ಅಧ್ಯಕ್ಷ ಎನ್. ಶಂಕರಪ್ಪ ನೋಟಿಸ್ ಜಾರಿ ಮಾಡಿದ್ದಾರೆ. ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಗ್ಗೆ 7 ದಿನಗಳೊಳಗೆ ವಿವರಣೆ ನೀಡುವಂತೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಿದ್ದಕ್ಕೆ ಬಿ.ಜೆ.ಪಿ. ಮತ್ತು ಸಂಘ ಪರಿವಾರದ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇದೇ ಸಂದರ್ಭದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಶಾಸಕ ಆನಂದ್ ಸಿಂಗ್ ಪಾಲ್ಗೊಂಡಿದ್ದು ಭಾರೀ ಸುದ್ದಿಯಾಗಿತ್ತು. ಈ ಕಾರಣಕ್ಕೆ ಅವರಿಗೆ ನೋಟಿಸ್ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...