alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಇಬ್ರಾಹಿಂ ಅವಿರೋಧ ಆಯ್ಕೆ..?

cm-i-mlc-b

ಬೆಂಗಳೂರು: ವಿಧಾನಪರಿಷತ್ ನ ಒಬ್ಬರು ಸದಸ್ಯರ ಆಯ್ಕೆಗೆ ನಡೆಯಲಿರುವ ಉಪ ಚುನಾವಣೆಗೆ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಮತ್ತು ಚುನಾವಣಾಧಿಕಾರಿ ಎಸ್. ಮೂರ್ತಿ ಅವರಿಗೆ ಇಬ್ರಾಹಿಂ 4 ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದ್ದು, ಅವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯುವ ಅಂತಿಮ ಗಡುವು ಮುಗಿದ ಬಳಿಕ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಗಳು ಘೋಷಿಸಲಿದ್ದಾರೆ.

ಸಿ.ಎಂ. ಇಬ್ರಾಹಿಂ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...