alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಕ್ಕೆ ವಂಚಿಸಿದ್ದ 7 ಶಾಸಕರ ವಿರುದ್ಧ ದೂರು

ಬಿಬಿಎಂಪಿ ಚುನಾವಣೆಯಲ್ಲಿ ಮತದಾನದ ಹಕ್ಕು ಪಡೆಯಲೆಂದೇ ತಪ್ಪು ವಿಳಾಸ ಕೊಟ್ಟು ಹಾಗೂ ನಕಲಿ ಬಿಲ್ ಸಲ್ಲಿಸಿ ಹೆಚ್ಚುವರಿ ಭತ್ಯೆ ಪಡೆದಿದ್ದ ಆರೋಪದ ಮೇಲೆ ಏಳು ಮಂದಿ ಹಾಲಿ ಶಾಸಕರು ಹಾಗೂ ಓರ್ವ ಮಾಜಿ ಶಾಸಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಯಚೂರಿನ ರಾಮಣ್ಣ ಎಂಬವರು ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ್ದ ದೂರಿನ ವಿಚಾರಣೆ ವೇಳೆ ನ್ಯಾಯಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ವಿಧಾನಸೌಧ ಪೊಲೀಸರಿಗೆ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ವಿಧಾನಪರಿಷತ್ ಸದಸ್ಯರಾದ ರವಿ, ರಘು ಆಚಾರ್, ಆರ್.ಬಿ. ತಿಮ್ಮಾಪುರ, ಎನ್.ಎಸ್. ಭೋಸರಾಜು, ಅಲ್ಲಂ ವೀರಭದ್ರಪ್ಪ, ಅಪ್ಪಾಜಿ ಗೌಡ, ಸಿ.ಆರ್. ಮನೋಹರ್ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...