alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ನಲ್ಲಿ ಸೆರೆಯಾಯ್ತು ಮಹಿಳೆಯ ಸ್ನಾನದ ದೃಶ್ಯ

ಬಳ್ಳಾರಿ: ಮಹಿಳೆಯೊಬ್ಬರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಿಸುವ ದೃಶ್ಯಗಳನ್ನು ಸೆರೆಹಿಡಿದು ಬ್ಲಾಕ್ ಮೇಲ್ ಮಾಡಿದ ಪೊಲೀಸ್ ವಿರುದ್ಧ ಹೊಸಪೇಟೆ ಟೌನ್ ಪೊಲೀಸರಿಗೆ ದೂರು ನೀಡಲಾಗಿದೆ.

ಹೊಸಪೇಟೆಯ ಪಟೇಲ್ ನಗರದಲ್ಲಿ ವಾಸವಾಗಿರುವ ಮಹಿಳೆಯ ಸ್ನಾನದ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ಪಕ್ಕದ ಮನೆಯ ಪೊಲೀಸ್, ನಂತರದಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ಪೀಡಿಸಿದ್ದಾನೆ.

ಇದರಿಂದ ರೋಸಿಹೋದ ಮಹಿಳೆ ಪತಿಗೆ ವಿಚಾರ ತಿಳಿಸಿದ್ದು, ಅವರು ಪೊಲೀಸನೊಂದಿಗೆ ಮಾತನಾಡಿದ್ದಾರೆ. ಅವರಿಂದ ಹಣ ಪಡೆದ ಪೊಲೀಸ್ ವಿಡಿಯೋ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾನೆ.

ಕೆಲವು ದಿನಗಳ ಬಳಿಕ ಮತ್ತೆ ಮಹಿಳೆಗೆ ಕಾಟ ಕೊಡಲು ಶುರು ಮಾಡಿದ್ದು, ಹೇಳಿದಂತೆ ಕೇಳದಿದ್ದರೆ, ಸ್ನಾನದ, ಬಟ್ಟೆ ಬದಲಿಸುವ ದೃಶ್ಯಗಳನ್ನು ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದಾನೆ. ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪೊಲೀಸ್ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...