alex Certify
ಕನ್ನಡ ದುನಿಯಾ       Mobile App
       

Kannada Duniya

ದಾವಣಗೆರೆ ದುಗ್ಗಮ್ಮನ ಜಾತ್ರೆ, ಬಿ.ಎಸ್.ವೈ. ಬರ್ತಡೇಗೆ ಮೋದಿ

ರಾಜ್ಯದ ರೈತಾಪಿ ವರ್ಗವನ್ನು ತನ್ನತ್ತ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿರುವ ಬಿ.ಜೆ.ಪಿ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪತ್ರ ಬರೆದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಮ್ಮ ಕುಟುಂಬಕ್ಕೆ ನೆರವಾಗುತ್ತೇವೆ ಎಂದು ಭರವಸೆ ನೀಡಲಾಗಿದೆ.

ಬೆಣ್ಣೆದೋಸೆ ನಗರಿ ದಾವಣಗೆರೆಯಲ್ಲಿ ಇಂದು ಬಿ.ಜೆ.ಪಿ., ಅನ್ನದಾತರ ಸಮಾವೇಶ ಆಯೋಜಿಸಿದೆ. ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆ ನಡೆಯಲಿದೆ. ಇಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ ಕೂಡ ಆಗಿದೆ.

ದಾವಣಗೆರೆ ರಾಜಕೀಯ ಅದೃಷ್ಟದ ನೆಲವಾಗಿದೆ. ಅನೇಕ ರಾಜಕೀಯ ಸಮಾವೇಶಗಳು ಇಲ್ಲಿಂದಲೇ ಆರಂಭವಾಗಿವೆ. ಬಿ.ಎಸ್.ವೈ. 75 ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ರೈತ ಸಮಾವೇಶ ಆಯೋಜಿಸಿದ್ದು, ಅವರಿಗೆ ರೈತ ಬಂಧು ಬಿರುದು ಪ್ರದಾನ ಮಾಡಲಾಗುವುದು.

ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ದಾವಣಗೆರೆಗೆ ಆಗಮಿಸಲಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ರಾಜಕೀಯ ರಣಕಹಳೆ ಮೊಳಗಿಸಲಿದ್ದಾರೆ. ಅವರು ಇಂದು ಮಹದಾಯಿ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...