
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಳಿಕ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕಾಂಗ್ರೆಸ್ ಪರವಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದು, ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೂ ರಾಜ್ಯದೆಲ್ಲೆಡೆ ಭರ್ಜರಿ ಪ್ರಚಾರ ನಡೆಸಿದ್ದು, ಇಂದಿನಿಂದ ರಾಜ್ಯದಕ್ಕೆ ಆಗಮಿಸಿ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ.
ಇನ್ನು ಬಿ.ಜೆ.ಪಿ. ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ರಾಜ್ಯದ ವಿವಿಧೆಡೆ ಬೃಹತ್ ಸಮಾವೇಶಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳ ಕುರಿತಾಗಿ ಈಗಾಗಲೇ ಸಿದ್ಧತೆಗಳನ್ನುಕೈಗೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಮೋದಿ ಪ್ರಚಾರಕ್ಕೆ ಆಗಮಿಸಲಿದ್ದು, 12 ಕ್ಕೂ ಅಧಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.