alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಭೇಟಿ ಹಿನ್ನಲೆ: ಧರ್ಮಸ್ಥಳದಲ್ಲಿ ಬಿಗಿ ಭದ್ರತೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು, ಅಕ್ಟೋಬರ್ 29 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನ ಮಂತ್ರಿಯವರ ವಿಶೇಷ ಭದ್ರತಾ ಪಡೆ(SPG) ಹಿರಿಯ ಅಧಿಕಾರಿ ಎಂ.ಪಿ. ಗುಪ್ತಾ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಮಾವೇಶ ನಡೆಯಲಿರುವ ಉಜಿರೆ ಮತ್ತು ಧರ್ಮಸ್ಥಳದಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದೆ.

ರಾಜ್ಯ ಪೊಲೀಸ್ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸಿದ್ದು, ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹದಳದಿಂದ ಧರ್ಮಸ್ಥಳ, ಕನ್ಯಾಡಿ, ಉಜಿರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಂಬಿಂಗ್ ನಡೆಸಲಾಗಿದೆ. ತೀವ್ರ ನಿಗಾ ವಹಿಸಲಾಗಿದೆ.

ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಭಕ್ತರಿಗೆ ಸ್ವಾಮಿಯ ದರ್ಶನವಿರುವುದಿಲ್ಲ. ಅಲ್ಲದೇ ಉಜಿರೆ, ಧರ್ಮಸ್ಥಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...