alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕ ಹ್ಯಾರಿಸ್ ಪುತ್ರನಿಗಿಲ್ಲ ಬಿಡುಗಡೆ ಭಾಗ್ಯ

ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದ್ದು, ಏಪ್ರಿಲ್ 28 ರವರೆಗೆ ಇದು ಮುಂದುವರೆಯಲಿದೆ.

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿರುವ ಮೊಹಮ್ಮದ್ ನಲಪಾಡ್ ವಿಚಾರಣೆಯನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಿದ 1 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಏಪ್ರಿಲ್ 28 ರ ವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದ್ದಾರೆ.

ಬೆಂಗಳೂರಿನ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತಾತನ ಸಹಚರರು ಹಲ್ಲೆ ನಡೆಸಿದ್ದರಲ್ಲದೇ ಆಸ್ಪತ್ರೆಗೆ ದಾಖಲಾಗಲು ಹೋದ ವೇಳೆ ಅಲ್ಲಿಯೂ ದಬ್ಬಾಳಿಕೆ ನಡೆಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...