alex Certify
ಕನ್ನಡ ದುನಿಯಾ       Mobile App
       

Kannada Duniya

ಗುರುರಾಯರ ದರ್ಶನ ಪಡೆದ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್

ಬೈಠಕ್​ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಆಗಮಿಸಿರುವ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಇಂದು ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ, ಗುರುರಾಯರ ದರ್ಶನ ಪಡೆದರು.

ಆರ್.ಎಸ್.ಎಸ್. ಬೈಠಕ್ ಹಿನ್ನಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ರಾಯಚೂರಿಗೆ ಆಗಮಿಸಿರುವ ಮೋಹನ್ ಭಾಗವತ್, ಇಂದು ಬೆಳಿಗ್ಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ರಾಯರ ದರ್ಶನ ಪಡೆದಿದ್ದಾರೆ. ಈ ವೇಳೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರರು ಭಾಗವತ್​ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.

ಇಂದಿನಿಂದ ಮೂರು ದಿನಗಳ ಕಾಲ ಮಂತ್ರಾಲಯದ ಟಿಟಿಡಿ ಪ್ರವಾಸಿ ಮಂದಿರಲ್ಲಿ ಆರ್.ಎಸ್.ಎಸ್.​ ಸಮನ್ವಯ ಬೈಠಕ್​ ನಡೆಯಲಿದ್ದು, ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದ್ದಾರೆ. ಬೈಠಕ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದು, ಆರ್.ಎಸ್.ಎಸ್. ನ ನೂರಕ್ಕೂ ಹೆಚ್ಚು ಅಂಗ ಸಂಸ್ಥೆಗಳ ಪ್ರಮುಖರು ಭಾಗಿಯಾಗಲಿದ್ದಾರೆ.

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆರ್.ಎಸ್.ಎಸ್.​ ನ ಈ ಬೈಠಕ್​ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...