alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲುಗೆ ಸೆಡ್ಡು ಹೊಡೆಯಲು ಸಜ್ಜಾದ ತಿಪ್ಪೇಸ್ವಾಮಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ತಪ್ಪಿರುವ ಕಾರಣ ಆಕ್ರೋಶಗೊಂಡಿರುವ ಮೊಳಕಾಲ್ಮೂರು ಕ್ಷೇತ್ರದ ಶಾಸಕ ತಿಪ್ಪೇಸ್ವಾಮಿ, ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾಗಿರುವ ಶ್ರೀರಾಮುಲುರನ್ನು ಸೋಲಿಸಿಯೇ ಸಿದ್ದ ಎಂದು ಹೇಳಿದ್ದು, ಈಗ ಪಕ್ಷೇತರರಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆಂದು ಹೇಳಲಾಗಿದೆ.

ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ವಿರುದ್ದ ಪ್ರತಿಭಟನೆ ನಡೆಸಿದ್ದರಲ್ಲದೇ ಅವರ ವಾಹನದ ಮೇಲೆ ಕಲ್ಲು ತೂರಿದ್ದರು. ಬಳಿಕ ಮಾತನಾಡಿದ್ದ ಶ್ರೀರಾಮುಲು, ತಿಪ್ಪೇಸ್ವಾಮಿಯವರ ಜೊತೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಯಾವುದೇ ಬೆದರಿಕೆಗೆ ಮಣಿಯದೆ ಮೊಳಕಾಲ್ಮೂರು ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದರು.

ಇದಾದ ಬಳಿಕ ತಿಪ್ಪೇಸ್ವಾಮಿ ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಯತ್ನ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೂ ಭೇಟಿಯಾಗಿದ್ದರು. ಆದರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಟಿಕೆಟ್ ನೀಡಲು ಸಾಧ್ಯವಿಲ್ಲವೆಂದು ಸಿದ್ದರಾಮಯ್ಯವನರು ಹೇಳಿರುವ ಕಾರಣ ಪಕ್ಷೇತರವಾಗಿ ಕಣಕ್ಕಿಳಿಯುವ ಮೂಲಕ ಶ್ರೀರಾಮುಲುಗೆ ಸೆಡ್ಡು ಹೊಡೆಯಲು ತಿಪ್ಪೇಸ್ವಾಮಿ ಮುಂದಾಗಿದ್ದಾರೆನ್ನಲಾಗಿದೆ. ತಮ್ಮ ಬೆಂಬಲಿಗರ ಜೊತೆ ಮಾತುಕತೆ ನಡೆಸುತ್ತಿರುವ ತಿಪ್ಪೇಸ್ವಾಮಿ ಚುನಾವಣೆಗೆ ಪೂರಕ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...