alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ.ಗೆ ಬಿಗ್ ಶಾಕ್! ಶ್ರೀರಾಮುಲು –ತಿಪ್ಪೇಸ್ವಾಮಿ ಬೆಂಬಲಿಗರ ಘರ್ಷಣೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಸಂಸದ ಶ್ರೀರಾಮುಲು ಅವರಿಗೆ ಬಿ.ಜೆ.ಪಿ. ಟಿಕೆಟ್ ನೀಡಿರುವುದನ್ನು ವಿರೋಧಿಸಿ, ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಶ್ರೀರಾಮುಲು ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಇಂದಿನಿಂದ ಪ್ರಚಾರಕ್ಕೆ ಚಾಲನೆ ನೀಡಲು ಮುಂದಾಗಿದ್ದಾರೆ.

ಶ್ರೀರಾಮುಲು ಅವರನ್ನು ಸ್ವಾಗತಿಸಲು ಪಕ್ಷದ ಮುಖಂಡರು ಸಜ್ಜಾಗಿದ್ದ ವೇಳೆಯಲ್ಲಿ ತಿಪ್ಪೇಸ್ವಾಮಿ ಬೆಂಬಲಿಗರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ತಿಪ್ಪೇಸ್ವಾಮಿ ಅವರಿಗೇ ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಶ್ರೀರಾಮುಲು ಬೆಂಬಲಿಗ, ತಾಲ್ಲೂಕು ಬಿ.ಜೆ.ಪಿ. ಮುಖಂಡ ವೆಂಕಟಸ್ವಾಮಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮುಲು ಮತ್ತು ತಿಪ್ಪೇಸ್ವಾಮಿ ಬೆಂಬಲಿಗರ ನಡುವೆ ಘರ್ಷಣೆ ಮುಂದುವರೆದಿದ್ದು, ನಾಯಕನಹಟ್ಟಿಯಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ತಿಪ್ಪೇಸ್ವಾಮಿ ಬೆಂಬಲಿಗರಿಂದ ಶ್ರೀರಾಮುಲು ಪ್ರತಿಭಟನೆ ಸ್ವಾಗತ ಎದುರಿಸಬೇಕಾಗಿದೆ. ತಿಪ್ಪೇಸ್ವಾಮಿ ಅವರನ್ನು ಪಕ್ಷೇತರರಾಗಿ ನಿಲ್ಲಿಸಲು ಬೆಂಬಲಿಗರು ತೀರ್ಮಾನಿಸಿದ್ದಾರೆ.

ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ನಿಲ್ಲಿಸಿ ಸುತ್ತಲಿನ ಕ್ಷೇತ್ರ, ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗಳಿಸಬೇಕೆಂದುಕೊಂಡಿದ್ದ ಬಿ.ಜೆ.ಪಿ.ಗೆ ಬಿಗ್ ಶಾಕ್ ಆದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...