alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಮುಖಂಡನಿಗೆ ಸೇರಿದ 10 ಲಕ್ಷ ರೂ. ಜಪ್ತಿ

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.

ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂಬುದಕ್ಕೆ ಪೂರಕವಾಗಿ ಈಗಾಗಲೇ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ಹಣ ಜಪ್ತಿ ಮಾಡಲಾಗಿದೆ. ಅದೇ ರೀತಿ, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಮಾಕನೂರು ಚೆಕ್ ಪೋಸ್ಟ್ ಬಳಿ ರಾಜ್ಯ ಬಿ.ಜೆ.ಪಿ. ನಾಯಕರೊಬ್ಬರಿಗೆ ಸೇರಿದ 10 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಾಗಿನೆಲೆಯಲ್ಲಿ ಒ.ಬಿ.ಸಿ. ಸಮಾವೇಶ ನಡೆಯಲಿದ್ದು, ಅಲ್ಲಿಗೆ ಈ ಹಣವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಚೆಕ್ ಪೋಸ್ಟ್ ಬಳಿ ಪೊಲೀಸರು ಹಾಗೂ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಕಾರಿನಲ್ಲಿ 10 ಲಕ್ಷ ರೂ. ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಕುಮಾರಪಟ್ಟಣಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...