alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಹತ್ಯೆಗೆ ಬಳಸಿದ ಬೈಕ್ ಪತ್ತೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಬಳಸಲಾಗಿದ್ದ ಬೈಕ್ ನ್ನು ಮುಂಬೈನಲ್ಲಿ ವಶಕ್ಕೆ ಪಡೆಯಲಾಗಿದೆ.

ಕಳೆದ ವರ್ಷ ಹತ್ಯೆಯಾಗಿದ್ದ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು‌ ಬೈಕ್ ನಲ್ಲಿ ಹಿಂಬಾಲಿಸಿಕೊಂಡು‌ ಬಂದು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈಗಾಗಲೇ ಸಾಲು ಸಾಲು ಆರೋಪಿಗಳನ್ನು ಕರ್ನಾಟಕ‌ ಪೊಲೀಸರು ಬಂಧಿಸಿದ್ದರೂ, ಹತ್ಯೆಗೆ ಬಳಸಲಾಗಿದ್ದ ಬೈಕ್ ಸಿಕ್ಕಿರಲಿಲ್ಲ.

ಆದರೆ ಮುಂಬೈ ಉಗ್ರಗಾಮಿ‌ ನಿಗ್ರಹ ಪಡೆ ಸಹಾಯದೊಂದಿಗೆ ಶನಿವಾರ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಸಿಬಿಐ ಅಧಿಕಾರಿಗಳು ಗೌರಿ ಲಂಕೇಶ್ ಹತ್ಯೆಯಲ್ಲಿರುವ ಕೆಲವರು ದಾಬೋಲ್ಕರ್ ಹತ್ಯೆಯಲ್ಲಿಯೂ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿದ್ದರು. ಇದೀಗ ಹತ್ಯೆಗೆ ಬಳಸಿದ್ದ ಬೈಕ್ ಪತ್ತೆಯಾಗಿದ್ದರಿಂದ, ಪ್ರಕರಣ ಮತ್ತಷ್ಟು ತಿರುವು ಪಡೆಯುವ ಸಾಧ್ಯತೆಯಿದೆ ಎಂದು ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...