alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಪಾರಾದ ಸಂಸದ ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದ ಲೋಕಸಭೆ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಮಂಗಳಗಡ ಸಮೀಪ ನಿನ್ನೆ ರಾತ್ರಿ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕಾಶ್ ಹುಕ್ಕೇರಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾರು ಚಾಲಕ ಮತ್ತು ಗನ್ ಮ್ಯಾನ್ ಅವರೂ ಗಾಯಗೊಂಡಿದ್ದು, ಸೊಲ್ಲಾಪುರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸೊಲ್ಲಾಪುರದಲ್ಲಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪ್ರಕಾಶ್ ಹುಕ್ಕೇರಿ ತೆರಳುವಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...