alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್.ಆರ್. ನಗರ ಶಾಸಕ ಮುನಿರತ್ನಗೆ ಬಿಗ್ ರಿಲೀಫ್

ಬೆಂಗಳೂರು: ಮತದಾರರ ಗುರುತಿನ ಚೀಟಿ ಅಕ್ರಮ ಸಂಗ್ರಹಣೆ ಪ್ರಕರಣದಲ್ಲಿ ಆರ್.ಆರ್. ನಗರ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರಿಗೆ ರಿಲೀಫ್ ಸಿಕ್ಕಿದೆ.

ಜಾಲಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಸುಮಾರು 9000 ಮತದಾರರ ಗುರುತಿನ ಚೀಟಿ ಕಂಡು ಬಂದಿದ್ದು, ಚುನಾವಣಾಧಿಕಾರಿಗಳು ಹಾಗೂ ಜಾಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇತ್ತೀಚೆಗೆ ಕೋರ್ಟ್ ಜಾಮೀನು ರಹಿತ ಕೇಸ್ ದಾಖಲಿಸಲು ಸೂಚನೆ ನೀಡಿತ್ತು.

ಮುನಿರತ್ನ ಅವರ ವಿರುದ್ಧ ಜಾಮೀನು ರಹಿತ ಕೇಸ್ ಇನ್ನೂ ದಾಖಲಾಗದ ಹಿನ್ನಲೆಯಲ್ಲಿ ಅಕ್ರಮ ಐ.ಡಿ. ಸಂಗ್ರಹ ಪ್ರಕರಣದಲ್ಲಿ 14 ನೇ ಆರೋಪಿಯಾಗಿದ್ದ ಅವರಿಗೆ ಜಾಮೀನು ಸಿಕ್ಕಿದೆ. ಅಕ್ರಮವಾಗಿ ಟೀ ಶರ್ಟ್ ಸಾಗಿಸುತ್ತಿದ್ದ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದ್ದು, ಈ ಪ್ರಕರಣದಲ್ಲಿಯೂ ಅವರಿಗೆ ಜಾಮೀನು ದೊರೆತಿದೆ. ಚುನಾವಣಾ ಆಯೋಗ ರಾಜರಾಜೇಶ್ವರಿ ನಗರದ ಚುನಾವಣೆಯನ್ನು ಮುಂದೂಡಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...