alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದ ಮುರಳಿಧರ್ ರಾವ್ ಹೇಳಿಕೆ

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಇಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದ ಮುರಳೀಧರ ರಾವ್ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇನ್ನೂ ಎರಡು ದಿನಗಳ ಕಾಲಾವಕಾಶವಿದೆ. ಏನಾಗಲಿದೆ ಎಂಬುದನ್ನು ಕಾದು ನೋಡೋಣ ಎಂದು ಮಾರ್ಮಿಕವಾಗಿ ತಿಳಿಸಿದರು.

ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ಬಯಸಲಿಲ್ಲವಾದರೂ ಅವರ ಇಂದಿನ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ನಾಡಿದ್ದು ಸದನದಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ. ಇದರ ಮಧ್ಯೆ ಮುರಳೀಧರ ರಾವ್ ರವರ ಈ ಹೇಳಿಕೆ ಕುತೂಹಲಕಾರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...