alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಬೆಂಗಳೂರು: ವೃದ್ಧ ದಂಪತಿಯ ಕೈಕಾಲು ಕಟ್ಟಿಹಾಕಿ, ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಬ್ರಿಡ್ಜ್ ಸಮೀಪ ಅಶ್ವಥ್ ನಗರದಲ್ಲಿ ನಡೆದಿದೆ.

ಬಿ.ಇ.ಎಲ್. ನಿವೃತ್ತ ಉದ್ಯೋಗಿ ಗೋವಿಂದನ್, ಅವರ ಪತ್ನಿ ಸರೋಜ ಹತ್ಯೆಯಾದವರು. ಮನೆಗೆ ನುಗ್ಗಿದ ದುಷ್ಕರ್ಮಿಗಳು ಕೃತ್ಯವೆಸಗಿ ಮನೆಯಲ್ಲಿದ್ದ ಚಿನ್ನಾಭರಣ, ನಗದು, ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

2 -3 ದಿನಗಳಿಂದ ದಂಪತಿ ಮನೆಯಿಂದ ಹೊರಗೆ ಬಂದಿರಲಿಲ್ಲ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಕೊಳೆತ ಸ್ಥಿತಿಯಲ್ಲಿದ್ದ ದಂಪತಿಯ ಶವ ಕಂಡು ಬಂದಿದೆ. ದುಷ್ಕರ್ಮಿಗಳು ಹತ್ಯೆ ಮಾಡಿ, ಮನೆಯಲ್ಲಿದ್ದ ವಸ್ತುಗಳನ್ನು ದೋಚಿದ್ದು, ಬಳಿಕ ಸಿಲಿಂಡರ್ ಸ್ಪೋಟಿಸುವ ಪ್ರಯತ್ನ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...