alex Certify
ಕನ್ನಡ ದುನಿಯಾ       Mobile App
       

Kannada Duniya

ಹತ್ಯೆಯಲ್ಲಿ ಅಂತ್ಯವಾಯ್ತು ಒಂದೇ ಹುಡುಗಿ ಮೇಲಿನ ಇಬ್ಬರ ಪ್ರೀತಿ

ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನೇ ಸ್ನೇಹಿತನೂ ಇಷ್ಟಪಟ್ಟಿದ್ದಾನೆಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಾಳ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದ್ದು, ಹರೀಶ್ ಎಂಬಾತ ತನ್ನ ಸ್ನೇಹಿತ ಸಂತೋಷ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಸಂತೋಷ್ ತನ್ನ ಮತ್ತೊಬ್ಬ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಅಡ್ಡಗಟ್ಟಿದ ಹರೀಶ್ ಚಾಕುವಿನಿಂದ ಕತ್ತು ಹಾಗೂ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾನೆ. ಕುಸಿದು ಬಿದ್ದ ಸಂತೋಷ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...