alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ

ನಾಡಿನಾದ್ಯಂತ ಇಂದು ವಿಜಯದಶಮಿ ಸಂಭ್ರಮ. ಬನ್ನಿ ಮುಡಿಯಲು ಜನತೆ ಸಿದ್ಧವಾಗಿರುವುದರ ಮಧ್ಯೆ, ವಿಶ್ವ ವಿಖ್ಯಾತ ಜಂಬೂ ಸವಾರಿಗೂ ಕ್ಷಣಗಣನೆ ಆರಂಭವಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಆರಂಭವಾಗುವ ಜಂಬೂ ಸವಾರಿಗೂ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಮಧ್ಯಾಹ್ನ 2-30 ರಿಂದ 3-16 ರವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ.

ನಂತರ 3-40 ರಿಂದ 4-10 ರವರೆಗೆ ಸಲ್ಲುವ ಕುಂಭ ಲಗ್ನದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ, 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...