alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರಿನಲ್ಲಿ ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಮೈಸೂರಿನ ಟಿ. ನರಸೀಪುರ ಮುಖ್ಯರಸ್ತೆಯ ದೊಡ್ಡ ಆಲದ ಮರದ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

2 ಖಾಸಗಿ ಬಸ್ ಮತ್ತು 1 ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ತೀವ್ರತರವಾದ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಮೈಸೂರಿನಿಂದ ಹೋಗುತ್ತಿದ್ದ ಬಸ್ ನಡುವೆ ಕಾರು ಸಿಲುಕಿದ್ದು, ಕಾರು ತಪ್ಪಿಸಲು ಹೋದ ಬಸ್ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಬಸ್ ನಲ್ಲಿದ್ದವರಿಗೆ ತೀವ್ರವಾದ ಪೆಟ್ಟಾಗಿದೆ. ತಲೆ, ಕೈ ಕಾಲುಗಳಿಗೆ ಪೆಟ್ಟಾಗಿ ಹಲವರು ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಸಿದ್ಧಾರ್ಥನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕ್ರೇನ್ ಬಳಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಲಾಗ್ತಿದೆ. ಅಪಘಾತದ ಕಾರಣದಿಂದ ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...