alex Certify
ಕನ್ನಡ ದುನಿಯಾ       Mobile App
       

Kannada Duniya

2 ಬೈಕ್ ಡಿಕ್ಕಿಯಾಗಿ ನಾಲ್ವರ ಸಜೀವ ದಹನ

ಮೈಸೂರು: 2 ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಕೆ.ಆರ್. ನಗರ ತಾಲ್ಲೂಕಿನ ಅನಸೋಗೆ ಗ್ರಾಮದ ತಂದ್ರೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ ಬೈಕ್ ನಲ್ಲಿ ಡೀಸೆಲ್ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿ, ಡೀಸೆಲ್ ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲೇ ನಾಲ್ವರು ಸಜೀವ ದಹನವಾಗಿದ್ದಾರೆ.

ಸುತ್ತಲಿನ ಪ್ರದೇಶಕ್ಕೂ ಬೆಂಕಿ ಆವರಿಸಿಕೊಂಡಿದ್ದರಿಂದ ಬೈಕ್ ನಲ್ಲಿದ್ದವರು ಪಾರಾಗಲು ಸಾಧ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಕೆ.ಆರ್. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...