alex Certify
ಕನ್ನಡ ದುನಿಯಾ       Mobile App
       

Kannada Duniya

ಪಕ್ಷ ತೊರೆದ ರಹಸ್ಯ ಬಿಚ್ಚಿಡುವೆ ಎಂದ ಮಾಜಿ ಸಂಸದ…!

ಮೈಸೂರು: ಬಿ.ಜೆ.ಪಿ.ಯಿಂದ ದೂರವಾಗಿರುವ ಮಾಜಿ ಸಂಸದ ಸಿ.ಹೆಚ್. ವಿಜಯಶಂಕರ್ ಕಾಂಗ್ರೆಸ್ ಸೇರಲಿದ್ದಾರೆ.

ಜನವರಿ 19 ರಂದು ಬೆಂಗಳೂರಿನ ಕೆ.ಪಿ.ಸಿ.ಸಿ. ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಅವರು ಪಕ್ಷವನ್ನು ಸೇರಲಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಶಂಕರ್, ಜನವರಿ 19 ರಂದು ಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಯವರೊಂದಿಗೆ ಇಂದು ಪಕ್ಷ ಸೇರ್ಪಡೆ ಕುರಿತಾಗಿ ಮಾತನಾಡಿದ್ದು, ಮರಳಿ ತವರು ಪಕ್ಷವನ್ನು ಸೇರುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಪಕ್ಷ ಸೇರ್ಪಡೆ ದಿನದಂದು ಹಲವರ ಮುಖವಾಡ ಬಯಲು ಮಾಡುತ್ತೇನೆ. ಬಿ.ಜೆ.ಪಿ. ತೊರೆದ ಕಾರಣವನ್ನು ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...