alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಾಂಬ್ ಬೆದರಿಕೆ ಕರೆ

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಆತಂಕ ಮೂಡಿಸಿದೆ. ಪೀಪಲ್ಸ್ ಪಾರ್ಕ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತನೊಬ್ಬ ಕರೆ ಮಾಡಿದ್ದಾನೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ಸಿಬ್ಬಂದಿ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮಾಂತರ ಬಸ್ ನಿಲ್ದಾಣದ ಸಮೀಪದಲ್ಲೇ ಪೀಪಲ್ಸ್ ಪಾರ್ಕ್ ಇದ್ದು, ಪಾರ್ಕ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪಾರ್ಕ್ ನಲ್ಲಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಟ್ಟೆಯಲ್ಲಿ ಸುತ್ತಿದ ಅನುಮಾನಾಸ್ಪದ ವಸ್ತು ಕಂಡು ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.

ಜನನಿಬಿಡ ಸ್ಥಳವಾಗಿರುವುದರಿಂದ ಆತಂಕ ಮೂಡಿದ್ದು, ಕರೆ ಮಾಡಿದ ಅಪರಿಚಿತನ ಮಾಹಿತಿ ಕಲೆ ಹಾಕಿ ತೀವ್ರ ಶೋಧ ಕೈಗೊಳ್ಳಲಾಗಿದೆ. ಹಿಂದೆಯೂ ಇದೇ ರೀತಿ ಕರೆಗಳು ಬಂದಿದ್ದವು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...