alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. ಶಾಸಕ ಚಿಕ್ಕಮಾದು ನಿಧನ

ಮೈಸೂರು: ಹೆಚ್.ಡಿ. ಕೋಟೆ ಕ್ಷೇತ್ರದ ಜೆ.ಡಿ.ಎಸ್. ಪಕ್ಷದ ಶಾಸಕ ಚಿಕ್ಕಮಾದು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ಕಳೆದ 3 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದ್ದು, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

1978 ರಲ್ಲಿ ರಾಜಕೀಯ ಪ್ರವೇಶಿಸಿದ್ದ ಚಿಕ್ಕಮಾದು ಬಿಳಿಕೆರೆ ಜಿ.ಪಂ. ಕ್ಷೇತ್ರದ ಸದಸ್ಯರಾಗಿದ್ದರು. 1991 ರಲ್ಲಿ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರಲ್ಲದೇ, 2007 ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 2013 ರಲ್ಲಿ ಹೆಚ್.ಡಿ. ಕೋಟೆ ಕ್ಷೇತ್ರದಿಂದ ಜಯಗಳಿಸಿದ್ದರು.

ಹೊಸೂರುಹಳ್ಳಿಯವರರಾದ ಚಿಕ್ಕಮಾದು ಹೊಸರಾಮೇನಹಳ್ಳಿಯಲ್ಲಿ ನೆಲೆಸಿದ್ದರು. ಸದ್ಯ ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದರು. ವಿಜಯನಗರದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹೊಸರಾಮೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...