alex Certify
ಕನ್ನಡ ದುನಿಯಾ       Mobile App
       

Kannada Duniya

ಆಟೋ ನಾಲೆಗೆ ಬಿದ್ದು ಮೂವರು ಸಾವು….?

ಮೈಸೂರು: ಆಟೋ ನಾಲೆಗೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ವಾಟಾಳ್ ಸಮೀಪ ನಡೆದಿದೆ.

ಬಲ್ಲೇಶ್ವರ ಸ್ವಾಮಿ ದೇವಾಲಯದ ನಾಲೆಯ ಬಳಿ ಆಟೋ ಉರುಳಿದೆ. ಮೃತರು ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಬೂಂತನಹಳ್ಳಿಯವರಾಗಿದ್ದಾರೆ.

ಬಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಆಟೋದಲ್ಲಿ ನಾಲೆಯ ಏರಿಯ ರಸ್ತೆಯ ಮೇಲೆ ಹೋಗುವಾಗ ನಿಯಂತ್ರಣ ತಪ್ಪಿದ ಆಟೋ ಉರುಳಿ ಬಿದ್ದಿದೆ ಎನ್ನಲಾಗಿದೆ.

ಸ್ಥಳೀಯರು ನೀರಿನಲ್ಲಿ ಮುಳುಗಿದವರ ರಕ್ಷಿಸಿದ್ದಾರೆ. ನಾಪತ್ತೆಯಾದ ಮೂವರ ಪತ್ತೆಗೆ ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ಟಿ. ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...