alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

ಮೈಸೂರು: ಶಾಲಾ ವಾಹನಕ್ಕೆ ಬೆಂಕಿ ತಗುಲಿದ ಘಟನೆ ಮೈಸೂರಿನ ಕುವೆಂಪು ನಗರದ ವಿಜಯಾ ಬ್ಯಾಂಕ್ ವೃತ್ತದ ಬಳಿ ನಡೆದಿದೆ.

ಶಾಲಾ ಮಕ್ಕಳನ್ನು ಕರೆದೊಯ್ಯತ್ತಿದ್ದ ಸಂದರ್ಭದಲ್ಲಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಮಧ್ಯದಲ್ಲಿಯೇ ವಾಹನ ನಿಲ್ಲಿಸಿದ ಚಾಲಕ ಮಕ್ಕಳನ್ನು ಕೆಳಗೆ ಇಳಿಸಿದ್ದಾರೆ. ಕೂಡಲೇ ಎಲ್ಲಾ ಮಕ್ಕಳನ್ನು ದೂರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಚಾಲಕನ ಸಮಯ ಪ್ರಜ್ಞೆಯಿಂದಾಗಿ ಮಕ್ಕಳು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಕ್ಕಪಕ್ಕದ ವಾಹನಗಳಿಗೆ ಬೆಂಕಿ ಜ್ವಾಲೆ ಹರಡುವುದನ್ನು ತಪ್ಪಿಸಿದ್ದಾರೆ. ಈ ವೇಳೆಗಾಗಲೇ ವಾಹನ ಸುಟ್ಟು ಹೋಗಿದೆ. ರಸ್ತೆ ಮಧ್ಯದಲ್ಲಿಯೇ ವಾಹನ ಹೊತ್ತಿ ಉರಿದ ಕಾರಣ ಈ ಮಾರ್ಗದಲ್ಲಿ ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...