alex Certify
ಕನ್ನಡ ದುನಿಯಾ       Mobile App
       

Kannada Duniya

ಹುಣಸೂರಿನಲ್ಲಿ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ

ಮೈಸೂರು: ನಿಷೇಧಾಜ್ಞೆ ನಡುವೆಯೂ ಹನುಮ ಜಯಂತಿ ಮೆರವಣಿಗೆಗೆ ಮುಂದಾದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರಿಂದ, ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.

ಎಸ್.ಪಿ. ರವಿ ಡಿ. ಚನ್ನಣ್ಣನವರ್ ನೇತೃತ್ವದಲ್ಲಿ ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿ ಹಲವು ಹನುಮ ಭಕ್ತರನ್ನು ವಶಕ್ಕೆ ಪಡೆಯಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದರಿಂದ ಆಕ್ರೋಶಗೊಂಡ ಹನುಮ ಭಕ್ತರು, ಟೌನ್ ಹಾಲ್ ಬಳಿ ಮೆರವಣಿಗೆ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಮನವೊಲಿಸುವ ಪ್ರಯತ್ನ ವಿಫಲವಾಗಿದೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಪ್ರತಿಭಟನಾನಿರತ ಹನುಮಭಕ್ತರು ಮತ್ತೆ ಪೊಲೀಸರ ಮೇಲೆ ಕಲ್ಲು ತೂರಿದ್ದು, ಪೊಲೀಸರು ಅನೇಕ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...