alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್. ರಣಕಹಳೆ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಇಂದಿನಿಂದ ಪ್ರಚಾರವನ್ನು ಆರಂಭಿಸಿರುವ ಜೆ.ಡಿ.ಎಸ್. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಣಕಹಳೆ ಮೊಳಗಿಸಿದೆ.

ದೇವಿ ಚಾಮುಂಡೇಶ್ವರಿಗೆ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಇಲ್ಲಿಂದಲೇ ಜೆ.ಡಿ.ಎಸ್. ಪ್ರಚಾರ ಆರಂಭಿಸಲಾಗುತ್ತಿದೆ.

ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ‘ಕುಮಾರ ಪರ್ವ-ಹೊಸ ಮನ್ವಂತರದ ಶುಭಾರಂಭ’ ಘೋಷಣೆಯೊಂದಿಗೆ ಯಾತ್ರೆಗೆ ಚಾಲನೆ ನೀಡಲಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಾಗುವುದು.

ಇದಕ್ಕಾಗಿ ವಿಶೇಷ ವಾಹನ ಸಿದ್ಧವಾಗಿದ್ದು, ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ, ಮಾಜಿ ಸಂಸದ ವಿಶ್ವನಾಥ್ ಮೊದಲಾದವರು ಇಂದಿನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...