alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾದ ವಿದ್ಯಾರ್ಥಿನಿ ವರ್ತನೆಯಿಂದ ಬಯಲಾಯ್ತು ಸತ್ಯ

ಮೈಸೂರು: ಮೈಸೂರು ಕೆ.ಆರ್. ನಗರದ ಶಾಲೆಯೊಂದರಲ್ಲಿ ಕಾಮುಕ ಶಿಕ್ಷನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

6 ನೇ ತರಗತಿ ವಿದ್ಯಾರ್ಥಿನಿಗೆ 3 ತಿಂಗಳಿಂದ ಕಾಮುಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದು, ಇದರಿಂದಾಗಿ ವಿದ್ಯಾರ್ಥಿನಿಯ ವರ್ತನೆಯಲ್ಲಿ ಬದಲಾವಣೆ ಕಂಡು ಬಂದಿದೆ.

ಬಾಲಕಿ ಮೊದಲಿನಂತೆ ಇಲ್ಲದ ಕಾರಣ, ಆತಂಕಗೊಂಡ ಪೋಷಕರು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಮನಶಾಸ್ತ್ರಜ್ಞರಿಂದ ಕೌನ್ಸಿಲಿಂಗ್ ಮಾಡಿಸಿದ್ದಾರೆ. ಆಗ ವಿದ್ಯಾರ್ಥಿನಿ ಶಿಕ್ಷಕನ ಕೃತ್ಯದ ಬಗ್ಗೆ ತಿಳಿಸಿದ್ದಾಳೆ.

ಪೋಷಕರು ಶಾಲೆಗೆ ತೆರಳಿ ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಆರ್. ನಗರ ಠಾಣೆ ಪೊಲೀಸರು ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...