alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಿಗೆ ಖುಷಿ ಸುದ್ದಿ ನೀಡಿದ ಆಯುಕ್ತರು

ಮೈಸೂರು: ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ ಪೊಲೀಸರಿಗೆ ಕಡ್ಡಾಯ ರಜೆ ನೀಡಬೇಕೆಂದು ಮೈಸೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಪೇದೆಯಿಂದ ಹಿಡಿದು ಪೊಲೀಸರವರೆಗೆ ಎಲ್ಲಾ ಸಿಬ್ಬಂದಿಗೂ ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ರಜೆ ನೀಡುವಂತೆ ತಿಳಿಸಿದ್ದಾರೆ.

ವಿಶೇಷ ಸಂದರ್ಭಗಳಲ್ಲಿ ಕುಟುಂಬದವರೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಕಾರಣ, ಪೊಲೀಸರ ದೈಹಿಕ, ಮಾನಸಿಕ ಸ್ಥೈರ್ಯ ಕುಗ್ಗುತ್ತದೆ. ಪೊಲೀಸರು ಕುಟುಂಬದವರೊಂದಿಗೆ ಕಾಲಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಆಯುಕ್ತರು ರಜೆ ನೀಡುವಂತೆ ಸೂಚಿಸಿರುವುದರಿಂದ ಅನುಕೂಲವಾಗಲಿದೆ.

ಮಕ್ಕಳ ಹುಟ್ಟುಹಬ್ಬದಂದು ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಆಯಕ್ತರು ಎಲ್ಲಾ ಠಾಣೆ, ವಿಭಾಗಗಳ ಮೇಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...