alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಮಹಾದೇವಪ್ಪ ಕಾರಿಗೆ ಶಾಸಕರ ಕಾರ್ ಡಿಕ್ಕಿ

ಮೈಸೂರು: ಸಚಿವ ಮಹಾದೇವಪ್ಪ ಅವರ ಕಾರಿಗೆ, ಶಾಸಕ ಎಂ.ಕೆ. ಸೋಮಶೇಖರ್ ಅವರ ಕಾರ್ ಡಿಕ್ಕಿ ಹೊಡೆದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲ್ಲೂಕಿನ ಸಿಂಧೋಳ್ಳಿ ಬಳಿ ನಡೆದಿದೆ.

ಕಬಿನಿ ಜಲಾಶಯದಲ್ಲಿ ಪೂಜೆ ಸಲ್ಲಿಸಿ ವಾಪಸ್ ಆಗುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬಾಗಿನ ಅರ್ಪಿಸಿದ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರಿನಲ್ಲಿ ಸಚಿವ ಮಹಾದೇವಪ್ಪ ತೆರಳಿದ್ದಾರೆ.

ಸಚಿವರ ಕಾರಿನಲ್ಲಿ ಆಪ್ತ ಸಹಾಯಕ ತೆರಳುವಾಗ, ಶಾಸಕರ ಕಾರ್ ಎದುರಿನಿಂದ ಬಂದಿದೆ. ಎರಡೂ ಕಾರ್ ಗಳು ಚಾಲಕರ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಸಚಿವರ ಕಾರಿಗೆ ಹಾನಿಯಾಗಿದೆ.

ಘಟನೆಯಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದ್ದು, ಅಪಘಾತಕ್ಕೀಡಾಗಿದ್ದ ವಾಹನಗಳನ್ನು ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಸರಿಯಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...