alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು ಶಾಸಕರ ಪುತ್ರನ ವಿಡಿಯೊ

ಮೈಸೂರು: ಮೈಸೂರು ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್ ಅವರ ಪುತ್ರ ಜಯಂತ್ ಅವರಿಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯುವಕರ ತಂಡ ಕಟ್ಟಿಕೊಂಡು ಜಯಂತ್, ಯುವಕನೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ. ಜಯಂತ್ ಕೋಲಿನಿಂದ ಹಲ್ಲೆ ಮಾಡಿದರೆ, ಯುವಕನ ಕಾಲ ಮೇಲೆ ಇಬ್ಬರು ನಿಂತುಕೊಂಡಿದ್ದಾರೆ. ಯುವಕ ಅಂಗಲಾಚಿ ಬೇಡಿಕೊಂಡರೂ ಕರುಣೆ ತೋರದೇ ಆತನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ.

ಶಾಸಕರ ಪುತ್ರನ ಈ ದರ್ಪದ ವಿಡಿಯೊ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಲ್ಲೆಗೊಳಗಾದ ಯುವಕ ಯಾರು? ಯಾವ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬುದು ಗೊತ್ತಾಗಿಲ್ಲ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾ.ರಾ. ಮಹೇಶ್, ಇದು ಸುಮಾರು 2 ವರ್ಷಗಳ ಹಿಂದಿನ ಘಟನೆಯಾಗಿದ್ದು, ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆದಿದೆ. ತಪ್ಪು ಯಾರು ಮಾಡಿದರೂ ತಪ್ಪೇ. ಮತ್ತೆ ಬೇಕಾದರೆ ತನಿಖೆ ನಡೆಸಲಿ. ಚುನಾವಣೆ ಸಮೀಪಿಸುತ್ತಿರುವುದರಿಂದ ಇದನ್ನು ಹರಿಬಿಡಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...