alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ರಾಜ್ಯದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ..?

ಮೈಸೂರು: ರಾಜ್ಯದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲ್ಲೂಕಿನ ಗೊಲ್ಲನಬೀಡು ಗ್ರಾಮದಲ್ಲಿ 20 ವರ್ಷದ ಯುವತಿಯನ್ನು ಆಕೆಯ ಪೋಷಕರೇ ಕೊಂದು ಶವ ಸುಟ್ಟು ಹಾಕಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕಾಲೇಜಿಗೆ ಹೋಗಿ ಬರುತ್ತಿದ್ದ ಯುವತಿ ಆಲನಹಳ್ಳಿ ಗ್ರಾಮದ ದಲಿತ ಯುವಕನನ್ನು ಪ್ರೀತಿಸಿದ್ದಾಳೆ. ಪುತ್ರಿಯ ಪ್ರೀತಿಯ ವಿಷಯ ಮನೆಯಲ್ಲಿ ಗೊತ್ತಾಗಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಕೆಯನ್ನು ಕಾಲೇಜ್ ಬಿಡಿಸಿ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಫೆಬ್ರವರಿ 21 ರಂದು ಯುವತಿಗೆ ವಿಷ ಕುಡಿಸಿ ಜಮೀನಿನಲ್ಲೇ ಶವ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹೆಚ್.ಡಿ. ಕೋಟೆ ಠಾಣೆ ಪೊಲೀಸರು ಮಾಹಿತಿ ಪಡೆದು, ಮೃತ ಯುವತಿಯ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...