alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಅರೆಸ್ಟ್

mys-pro-ti

ಮೈಸೂರು: ಮೈಸೂರಿನ ವಿಜಯನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ  ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಅಜಯ್, ವೀರೇಂದ್ರ, ಗಿರೀಶ್ ಹಾಗೂ ಮಹೇಶ್ವರಿ ಎಂಬುವವರು ಬಂಧಿತ ಆರೋಪಿಗಳಾಗಿದ್ದಾರೆ.

ದಾಳಿಯಲ್ಲಿ 16,000 ರೂ. ನಗದು 4 ಮೊಬೈಲ್, 1 ಬೈಕ್ ವಶಕ್ಕೆ ಪಡೆಯಲಾಗಿದೆ. ವಿಜಯನಗರದ ಜನವಸತಿ ಪ್ರದೇಶದಲ್ಲಿರುವ ಈ ಮನೆಯಲ್ಲಿ ಅಪರಿಚಿತರು ಬಂದು ಹೋಗುತ್ತಿದ್ದು, ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿದ್ದಾರೆ.

ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...