alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ದಿನವೂ ಬಿರುಸಿನ ಚಟುವಟಿಕೆಯಲ್ಲಿ ರಾಹುಲ್ ಗಾಂಧಿ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ.

ಮೊದಲ ದಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದ ರಾಹುಲ್ ಗಾಂಧಿ, ವಿದ್ಯಾರ್ಥಿನಿಯರೊಂದಿಗೆ ಸಂವಾದ, ವಿವಿಧೆಡೆ ಸಭೆ, ಸಮಾರಂಭ, ಪಾದಯಾತ್ರೆ, ರೋಡ್ ಶೋಗಳಲ್ಲಿ ಭಾಗವಹಿಸಿದ್ದರು.

ರಾತ್ರಿ ಮೈಸೂರಿನಲ್ಲಿ ತಂಗಿರುವ ಅವರು ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ನಿನ್ನೆ ನಿಧನರಾದ ಬೇಲೂರು ಶಾಸಕ ರುದ್ರೇಶ್ ಗೌಡ ಅವರ ಅಂತಿಮ ದರ್ಶನಕ್ಕೆ ತೆರಳಲಿರುವ ಅವರು, ಅಲ್ಲಿಂದ ವಾಪಸ್ ಮೈಸೂರಿಗೆ ಆಗಮಿಸಿ, ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್ ಮೊದಲಾದವರು ರಾಹುಲ್ ಗಾಂಧಿಗೆ ಸಾಥ್ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...