alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ತವರಲ್ಲಿ ರಾಹುಲ್ ಗಾಂಧಿ ಬಿರುಸಿನ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗತೊಡಗಿದೆ. ಈಗಾಗಲೇ 3 ಹಂತದಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ಪಕ್ಷದ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಪ್ರವಾಸ ಕೈಗೊಂಡಿದ್ದಾರೆ.

ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇಂದಿನಿಂದ ರಾಹುಲ್ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ತೆರಳಿ ಸಂತೆಮರಹಳ್ಳಿ, ಯಳಂದೂರು, ಕೊಳ್ಳೆಗಾಲದಲ್ಲಿ ರೋಡ್ ಶೋ, ಸಮಾವೇಶ, ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯ ಜಿಲ್ಲೆಯ ವಿವಿಧೆಡೆ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ರಾಹುಲ್, ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿಲ್ಲ. ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಹಿನ್ನಲೆಯಲ್ಲಿ ರಾಹುಲ್ ಭೇಟಿ ನಿಗದಿಯಾಗಿಲ್ಲ. ಆದರೆ, ಕೊನೆ ಕ್ಷಣದಲ್ಲಿ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಬಹುದಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...