alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಮ್ಮೇಳನಾಧ್ಯಕ್ಷ ಚಂಪಾ

ಮೈಸೂರು: ಶಿಕ್ಷಣ ಸಚಿವ ತನ್ವೀರ್ ಸೇಠ್ ಖಾತೆಯನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದು, ಅವರನ್ನು ಬದಲಿಸಬೇಕೆಂದು 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಯವರು, ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಲಿ. ತನ್ವೀರ್ ಸೇಠ್ ಅವರು ಸಮ್ಮೇಳನಕ್ಕೂ ಬಂದಿಲ್ಲ. ಕನ್ನಡ ತಜ್ಞರೊಂದಿಗೆ ಚರ್ಚಿಸುವುದೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ಮಾತನಾಡಿದ ಸಾಹಿತಿ ಬರಗೂರು ರಾಮಚಂದ್ರಪ್ಪ, ಮುಖ್ಯಮಂತ್ರಿಯವರಿಗಿಂತ ಶಿಕ್ಷಣ ಸಚಿವರು ಬ್ಯುಸಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಚಂಪಾ, ಎಲ್ಲರ ಪರವಾಗಿ ಹಕ್ಕೊತ್ತಾಯವನ್ನು ಮಂಡಿಸುತ್ತಿದ್ದೇನೆ. ಶಿಕ್ಷಣ ಇಲಾಖೆಯ ಸಚಿವರಾಗಿದ್ದ ಗೋವಿಂದೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗದ ತನ್ವೀರ್ ಸೇಠ್ ಅವರ ಖಾತೆಯನ್ನು ಬದಲಿಸಬೇಕು ಎಂದಿದ್ದು, ಕನ್ನಡದ ಕೆಲಸದ ಬಗ್ಗೆ ಮುಖ್ಯಮಂತ್ರಿಯವರು ಹೇಳಿದ್ದ ಮಾತಿಗೆ ನಿರ್ಲಕ್ಷ್ಯ ತೋರಿದ ಸಚಿವರು ಸಂಪುಟದಲ್ಲಿ ಇರಬಾರದು ಎಂಬ ಮಾತನ್ನೂ ಸೇರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...