alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈ ಹಿಂದೆ 1917, 1930, 1955, 1990 ರಲ್ಲಿ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಈ ಬಾರಿ ಪ್ರೊ ಚಂದ್ರಶೇಖರ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯುತ್ತಿದೆ.

ಈಗಾಗಲೇ 13,500 ಕ್ಕೂ ಅಧಿಕ ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದಾರೆ. ಪ್ರತಿದಿನ ಸುಮಾರು 1.5 ಲಕ್ಷ ಜನ ಬರುವ ನಿರೀಕ್ಷೆ ಇದೆ.

ಮಹಾರಾಜ ಕಾಲೇಜು ಮೈದಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾಮಂಟಪದಲ್ಲಿ ರಾಷ್ಟ್ರಕವಿ ಕುವೆಂಪು ಪ್ರಧಾನ ವೇದಿಕೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

ಸಮ್ಮೇಳನಕ್ಕಾಗಿ ಮೈಸೂರು ನಗರ ಸಿಂಗಾರಗೊಂಡಿದ್ದು, ಕೆಂಪು, ಹಳದಿ ಬಾವುಟಗಳಿಂದ ಮೈಸೂರು ಕಂಗೊಳಿಸುತ್ತಿದೆ. 3 ದಿನಗಳ ಕಾಲ ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ, ಗೋಷ್ಠಿಗಳು ನಡೆಯಲಿವೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...